ಎ.26ರಂದು ವಿಶ್ವ ಪಶು ವೈದ್ಯಕೀಯ ದಿನಾಚರಣೆ

Update: 2019-04-22 16:35 GMT

ಉಡುಪಿ, ಎ.22: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಪಶು ವೈದ್ಯಕೀಯ ಸಂಘ ಉಡುಪಿ ಜಿಲ್ಲಾ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಎ.26ರಂದು ವಿಶ್ವ ಪಶು ವೈದ್ಯಕೀಯ ದಿಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪ್ರಯುಕ್ತ ಬೈಲೂರಿನಲ್ಲಿರುವ ಜಿಲ್ಲಾ ಪಾಲಿ ಕ್ಲಿನಿಕ್‌ನಲ್ಲಿ ಬೆಳಗ್ಗೆ 8ರಿಂದ 10 ಗಂಟೆಯವರೆಗೆ ಶ್ವಾನಗಳಿಗೆ ಉಚಿತ ರೇಬೀಸ್ ರೋಗ ನಿರೋಧಕ ಲಸಿಕೆ ಯನ್ನು ನೀಡಲಾಗುವುದು. ಅಲ್ಲದೇ ಉಚಿತ ಜಾನುವಾರು ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News