ಮೀಟರ್ ಬಡ್ಡಿ ದಂಧೆಯ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತರಿಂದ ಟ್ವೀಟ್ ಎಚ್ಚರಿಕೆ

Update: 2019-04-22 16:48 GMT

ಮಂಗಳೂರು, ಎ. 22: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವವರ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಕಠಿಣ ಕ್ರಮದ ಬಗ್ಗೆ ಟ್ವೀಟ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಕೆಲವರು ವಿಪರೀತ ಬಡ್ಡಿಯಲ್ಲಿ ಸಾಲ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

ಕರ್ಕಶ ಹಾನ್, ಪಾನಮತ್ತ ಚಾಲನೆ: ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯಪಾನ ಸೇವಿಸಿ ವಾಹನ ಚಲಾಯಿಸಿದ ಹಾಗೂ ಕರ್ಕಶ ಹಾನ್ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು 254 ಕೇಸು ದಾಖಲಿದ್ದಾರೆ.

ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಶನಿವಾರ ಮತ್ತು ರಮಿವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಮದ್ಯಪಾನ ಸೇವಿಸಿ ವಾಹನ ಚಲಾಯಿಸಿದ 200 ಕೇಸು ಮತ್ತು ಕರ್ಕಶ ಹಾರ್ನ್ ವಾಹನಕ್ಕೆ ಸಂಬಂಧಿಸಿ 54 ಪ್ರಕರಣ ದಾಖಲಿಸಿದ್ದಾರೆ. ಬಸ್ ಕರ್ಕಶ ಹಾರ್ನ್‌ಗಳನ್ನು ಸಂಪೂರ್ಣ ಕಿತ್ತು ತೆಗೆಯಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News