ಕಲ್ಬುರ್ಗಿ: ಜಿಲ್ಲೆಯಾದ್ಯಂತ ಸೂಕ್ತ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ

Update: 2019-04-22 18:09 GMT

ಕಲ್ಬುರ್ಗಿ, ಎ.22: ಕಲ್ಬುರ್ಗಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೂಕ್ತ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ 7 ತಾಲ್ಲೂಕುಗಳಲ್ಲಿ ಒಟ್ಟು 2,368 ಮತಗಟ್ಟೆಗಳಿದ್ದು, ಪ್ರತಿಯೊಂದು ಮತಗಟ್ಟೆಗೂ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಲು ಮತ್ತು ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 120 ಸೆಕ್ಟೆರ್ ಮೊಬೈಲ್, ಅದರ ಮೇಲ್ವಿಚಾರಣೆಗೆ 32 ಸೂಪರ್ ವೈಜಿಂಗ್ ತಂಡ, 12 ಡಿಎಸ್ಪಿನೇತೃತ್ವದ ತಂಡವನ್ನು ನಿಯೋಜನೆ ಮಾಡಲಾಗಿದೆ.

ಮತಗಟ್ಟೆಗಳಿಗೆ ಮತಯಂತ್ರಗಳನ್ನು ಸಾಗಿಸಲು 9 ಕಡೆ ಮಸ್ಟರಿಂಗ್ ಸೆಂಟರ್‌ಗಳ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News