ದಿಲ್ಲಿ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಾಕ್ಸರ್ ವಿಜೇಂದರ್ ಸಿಂಗ್ ಸ್ಪರ್ಧೆ

Update: 2019-04-23 05:01 GMT

ಹೊಸದಿಲ್ಲಿ, ಎ.23: ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ್ದ ಭಾರತದ ಮೊದಲ ಬಾಕ್ಸರ್ ಆಗಿದ್ದ ವಿಜೇಂದರ್ ಸಿಂಗ್ ರಾಷ್ಟ್ರರಾಜಧಾನಿಯ ದಕ್ಷಿಣ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಹೆಸರಿರುವ ಏಳನೇ ಅಭ್ಯರ್ಥಿ ವಿಜೇಂದರ್ ಸಿಂಗ್. ಸೋಮವಾರ ಆರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿತ್ತು.

ತನಗೆ ಅವಕಾಶ ನೀಡಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರಿಗೆ ಕೃತಜ್ಞತೆ ಸಲ್ಲಿಸುವೆ. 20 ವರ್ಷಗಳ ಬಾಕ್ಸಿಂಗ್ ವೃತ್ತಿಜೀವನದಲ್ಲಿ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡಿದ್ದೇನೆ. ಇದೀಗ ನನ್ನ ದೇಶದಲ್ಲಿ ಸೇವೆ ಮಾಡುವ ಅವಕಾಶ ಲಭಿಸಿದೆ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಬಾಕ್ಸಿಂಗ್ ಹೆಚ್ಚು ಜನಪ್ರಿಯ ಕ್ರೀಡೆಯಾಗಲು ಮಹತ್ವದ ಕೊಡುಗೆ ನೀಡಿರುವ ಸಿಂಗ್‌ಗೆ 2010ರಲ್ಲಿ ದೇಶದ ಮೂರನೇ ಉನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News