ಎ. 24: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ನಿಂದ ಓರ್ಬಿಟ್ ಕೆರಿಯರ್ ಗೈಡೆನ್ಸ್

Update: 2019-04-23 05:42 GMT

ಮುಡಿಪು: ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವಿಸ್ಡಂ ಹಾಗೂ ಕ್ಯಾಂಪಸ್ ಸಮಿತಿ ವತಿಯಿಂದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ  ಓರ್ಬಿಟ್ ಕೆರಿಯರ್ ಗೈಡೆನ್ಸ್ ಕಾರ್ಯಾಗಾರವು ಎ.24 ರಂದು ಬೆಳಗ್ಗೆ 9 ಗಂಟೆಗೆ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಲಿರುವುದು.

ಅಲ್- ಮದೀನಾ ಸಾರಥಿ ಅಬ್ಬಾಸ್ ಉಸ್ತಾದ್ ಉದ್ಘಾಟಿಸಲಿರುವರು. ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳ ಅಧ್ಯಕ್ಷತೆ ವಹಿಸಲಿರುವರು. ನಾಸಿರ್ ಬಜ್ಪೆ ಹಾಗೂ ಮನ್ಸೂರ್ ಹಿಮಮಿ ಮೊಂಟೆಪದವು ತರಗತಿಯನ್ನು ನಡೆಸಲಿದ್ದಾರೆ.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವಿಸ್ಡಂ ಕನ್ವೀನರ್ ಶರೀಫ್ ಪಾನೆಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News