ಎ.26ರಂದು ಸಾಲು ಮರದ ತಿಮ್ಮಕ್ಕ, ರಾಮಕೃಷ್ಣ ಮಿಷನ್‌ಗೆ ರೋಟರಿ ವಂದನಾ ಪ್ರಶಸ್ತಿ

Update: 2019-04-23 08:31 GMT

ಮಂಗಳೂರು, ಎ.23: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಬಾರಿಯ ರಾಜ್ಯಮಟ್ಟದ ವಾರ್ಷಿಕ ಪ್ರತಿಷ್ಠಿತ ವಂದನಾ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಹಾಗೂ ರಾಮಕೃಷ್ಣ ಮಿಷನ್ ಸಂಸ್ಥೆಗೆ ನೀಡಲಾಗುತ್ತಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಆಯ್ಕೆ ಸಮಿತಿಯ ಪ್ರಮುಖರಾದ ಡಾ.ದೇವದಾಸ್ ರೈ, ಎ.26ರಂದು ರಾತ್ರಿ 8 ಗಂಟೆಗೆ ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.

ಪರಿಸರ ಸಂರಕ್ಷಣೆಗೆ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಮತ್ತು ನೀಡಿದ ಅಮೂಲ್ಯ ಕೊಡುಗೆ ಮತ್ತು ಸಾಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ
ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.ಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಕಾರಿ ಡಾ.ಸೆಲ್ವಮಣಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪ್ರಶಸ್ತಿ ಪ್ರದಾನಿಸುವರು ಎಂದವರು ತಿಳಿಸಿದರು.

ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಸಂತೋಷ್ ಶೇಟ್ ಅಧ್ಯಕ್ಷತೆ ವಹಿಸಲಿದ್ದಾರೆ.ರೋಟರಿ ಜಿಲ್ಲಾ ಸಹಾಯಕ ಗವರ್ನರ್‌ಕಿರಣ್ ಪ್ರಸಾದ್ ರೈ, ರೋಟರ್ಯಾಕ್ಟ್ ಜಿಲ್ಲಾ ಚುನಾಯಿತ ಪ್ರತಿನಿಧಿ ಗಣೇಶ್ ಜಿ.ಟಿ ಅತಿಥಿಗಳಾಗಿರುವರು ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಸಂತೋಷ್ ಶೇಟ್, ಕಾರ್ಯದರ್ಶಿ ಜೋಯಲ್ ಲೋಬೊ, ಮತ್ತು ರೋಟರ್ಯಾಕ್ಟ್ ಮಂಗಳೂರು ಸಿಟಿ ಅಧ್ಯಕ್ಷ ಗಣೇಶ್ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News