ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

Update: 2019-04-23 14:37 GMT

ಬಂಟ್ವಾಳ, ಎ. 23: ಇಸ್ಪೀಟ್ ಚಟಕ್ಕಾಗಿ ತನ್ನದೇ ಮನೆಯ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡ ಪೂಂಜಾಲಕಟ್ಟೆ ಪೊಲೀಸರು ಆರೋಪಿಯನ್ನು ಬಂಧಿಸಿ, ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಗಂಪದಡ್ಡ ಎಂಬಲ್ಲಿನ ನಿವಾಸಿ ಸಾದಿಕ್ ಬಂಧಿತ ಆರೋಪಿ. ಬಂಧಿತನಿಂದ 62 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ವಿವರ:

ಎ. 19 ಯೂಸುಫ್ ಬ್ಯಾರಿ ಅವರ ಮನೆಯ ಹಿಂಬಾಗಿಲನ್ನು ಒಡೆದು ಕಪಾಟಿನ ಕಬ್ಬಿಣದ ಬೀರುವಿನೊಳಗಿದ್ದ ಚಿನ್ನದ ಒಡವೆಗಳು ಹಾಗೂ ನಗದು ಹಣವನ್ನು ಕಳವುಗೈಯಲಾಗಿತ್ತು. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್ ಅವರ ಮಾರ್ಗ ದರ್ಶನದಲ್ಲಿ ಬೆಳ್ತಂಗಡಿ ಸಿಐ ಸಂದೇಶ್, ಪುಂಜಾಲಕಟ್ಟೆ ಪಿಎಸ್ಸೈ ಕೆ.ಆರ್. ಸುನಿತಾ ಅವರು ತನಿಖೆ ಕೈಗೊಂಡು ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಈತ ಇಸ್ಪೀಟ್ ಆಟದ ಚಟಕ್ಕೆ ಹಣಕಾಸು ಹೊಂದಿಸಲು ತನ್ನ ಮನೆಯಿಂದಲೇ ಕಳವು ಕೃತ್ಯ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News