ಕುಂದಾಪುರ: ಉಚಿತ ಬೇಸಿಗೆ ಶಿಬಿರ

Update: 2019-04-23 16:31 GMT

ಉಡುಪಿ, ಎ.23: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಕುಂದಾಪುರ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ರಂಗರಂಗು-2019 ಉಚಿತ ಬೇಸಿಗೆ ಶಿಬಿರವನ್ನು ಎ.24ರಿಂದ ಮೇ 5ರವರೆಗೆ 12 ದಿನಗಳ ಕಾಲ ಕುಂದಾಪುರ ಬಾಲಭವನ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಈ ಬೇಸಿಗೆ ಶಿಬಿರದಲ್ಲಿ ಭಾಗವಹಿಸಲು 5ರಿಂದ 16ವರ್ಷದೊಳಗಿನ ಮಕ್ಕಳಿಗೆ ಮುಕ್ತ ಅವಕಾಶವಿದೆ.ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಆದ್ಯತೆಯಲ್ಲಿ ಪ್ರವೇಶಾವಕಾಶ ನೀಡಲಾಗುವುದು.

ಮಕ್ಕಳ ಅಸಾಧಾರಣ ಕ್ರಿಯಾಶಕ್ತಿಯನ್ನು ಉದ್ದೀಪಿಸುವ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಯೋಗ, ನೃತ್ಯ, ಕರಾಟೆ ಸೇರಿದಂತೆ ಅನೇಕ ಕಲಾ ಪ್ರಕಾರಗಳ ಪರಿಚಯ ಮಕ್ಕಳಿಗಾಗಲಿದೆ. ಹೆಚ್ಚಿನ ವಿವರಗಳಿಗೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿ ದೂರವಾಣಿ ಸಂ.:08254-230807ನ್ನು ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News