ಮೂರು ಪ್ರತ್ಯೇಕ ಪ್ರಕರಣ: ಅಕ್ರಮ ಚಿನ್ನ ಸಾಗಾಟ ಜಾಲ ಪತ್ತೆ

Update: 2019-04-23 16:33 GMT

ಮಂಗಳೂರು, ಎ. 23: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಜಾಲವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಏರ್‌ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನದಲ್ಲಿ ದೋಹಾದಿಂದ ಬರುತ್ತಿದ್ದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನ ಬಳಿ ಸುಮಾರು 14.81ಲಕ್ಷ ರೂ. ಮೌಲ್ಯದ 462.97 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದೇ ರೀತಿ ಇನ್ನೊಬ್ಬ ಪ್ರಯಾಣಿಕನನ್ನು ತಪಾಸಣೆ ಮಾಡುವಾಗಲೂ ಆತನ ಬಳಿಕ 20.51ಲಕ್ಷ ರೂ. ಮೌಲ್ಯದ 641ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದೆ. ಆರೋಪಿಗಳು ಗುದನಾಳದಲ್ಲಿ ಪೇಸ್ಟ್ ರೂದಲ್ಲಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಎ.16ರಂದು ದುಬೈಯಿಂದ ಮಂಗಳೂರಿಗೆ ಬಂದ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದ ಅಧಿಕಾರಿಗಳು 447.61 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 14.09 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News