ಶ್ರೀಲಂಕಾ: ಬಾಂಬ್ ಸ್ಫೋಟ; 10 ಭಾರತೀಯರು ಸಾವು

Update: 2019-04-23 18:18 GMT

ಕೊಲೊಂಬೆ, ಎ. 23: ಶ್ರೀಲಂಕಾದಲ್ಲಿ ಈಸ್ಟರ್ ರವಿವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಒಟ್ಟು 10 ಮಂದಿ ಭಾರತೀಯರು ಮೃತಪಟ್ಟಿದ್ದಾರೆ ಎಂದು ಭಾರತ ಹೈಕಮಿಷನ್ ಮಂಗಳವಾರ ಘೋಷಿಸಿದೆ.

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಇನ್ನಿಬ್ಬರು ಭಾರತೀಯ ಪ್ರಜೆಗಳು ಮೃತಪಟ್ಟಿರುವುದು ದೃಢಪಟ್ಟಿದೆ. ಮೃತಪಟ್ಟವರನ್ನು ಎ. ಮಾರೆಗೌಡ ಹಾಗೂ ಎಚ್. ಪುಟ್ಟರಾಜು ಎಂದು ಗುರುತಿಸಲಾಗಿದೆ. ಇದರೊಂದಿಗೆ ದುರಂತದಲ್ಲಿ ಮೃತಪಟ್ಟ ಭಾರತೀಯರ ಪ್ರಜೆಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News