ಮೇ ಮೊದಲ ವಾರದಲ್ಲಿ ಎಸೆಸೆಲ್ಸಿ ಫಲಿತಾಂಶ

Update: 2019-04-24 12:27 GMT

ಬೆಂಗಳೂರು, ಎ.24: ಪ್ರಸ್ತುತ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪೂರ್ಣಗೊಂಡಿರುವ ಹಿನ್ನೆಲೆ ಮೇ ತಿಂಗಳ ಮೊದಲನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ.

ಎ.23ರಂದು ಎಸೆಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮೇ 2ರೊಳಗೆ ಫಲಿತಾಂಶ ಹೊರಬಲಿದೆ. ಫಲಿತಾಂಶ ಪ್ರಕಟಿಸಿದ ಬಳಿಕ ಅಂಕಪಟ್ಟಿಯನ್ನು ಆನ್‌ಲೈನ್‌ನಲ್ಲಿ ಪಡೆಯಬಹುದಾಗಿದೆ. ಈ ಸಾಲಿನಲ್ಲಿ ರಾಜ್ಯದ 2,847 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

5,202 ಸರಕಾರಿ, 3,244 ಅನುದಾನಿತ ಹಾಗೂ 6,004 ಅನುದಾನ ರಹಿತ ಶಾಲೆಗಳು ಸೇರಿದಂತೆ, 14,450 ಶಾಲೆಗಳ ವಿದ್ಯಾರ್ಥಿಗಳು ಈ ಬಾರಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News