ರಾಷ್ಟ್ರಮಟ್ಟದ ಕೆವಿಪಿವೈ ಪರೀಕ್ಷೆಯಲ್ಲಿ ಮದನ್‌ಗೆ 51ನೇ ರ್ಯಾಂಕ್

Update: 2019-04-24 16:07 GMT

ಮಂಗಳೂರು, ಎ.24: ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮದನ್ ವೈ.ಎನ್. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ನಡೆದ ರಾಷ್ಟ್ರಮಟ್ಟದ 'ಕಿಶೋರ್‌ ವೈಜ್ಞಾನಿಕ್‌ ಪ್ರೋತ್ಸಾಹನ್‌ ಯೋಜನಾ (ಕೆವಿಪಿವೈ) ಸ್ಪರ್ಧಾತ್ಮಕ ಪರೀಕ್ಷೆಯ ಸಂದರ್ಶನದಲ್ಲಿ ಪಾಲ್ಗೊಂಡು 51ನೇ ರ್ಯಾಂಕ್ ಪಡೆದಿರುತ್ತಾರೆ.

2018ರ ನವೆಂಬರ್‌ನಲ್ಲಿ ನಡೆದ ಎಂಟ್ರೆನ್ಸ್ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಪಾಲ್ಗೊಂಡು ಈ ಸಾಧನೆಯನ್ನು ಮಾಡಿರುತ್ತಾರೆ. ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರವಾಗಲೇ ಈ ಸಾಧನೆಯನ್ನು ಮಾಡಿರುವ ರಾಜ್ಯದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

‘ನನಗೆ ಚಿಕ್ಕ ವಯಸ್ಸಿನಲ್ಲಿಯೇ ವಿಜ್ಞಾನ ವಿಭಾಗದಲ್ಲಿ ಸಂಶೋಧನೆ ಮಾಡಬೇಕು ಎಂಬ ತುಡಿತವಿತ್ತು. ಇದಕ್ಕಾಗಿ ಹೈಸ್ಕೂಲ್ ಕಲಿಯುವಾಗಲೇ ಕನಿಷ್ಟ 2 ಗಂಟೆಯನ್ನು ಹೆಚ್ಚಿನ ಅಧ್ಯಯನಕ್ಕಾಗಿ ಮೀಸಲಿಟ್ಟಿದ್ದೆ. ಕಠಿಣ ಓದಿನಿಂದಾಗಿ ನನಗೆ ಈ ಸಾಧನೆಯನ್ನು ಮಾಡಲು ಸಾಧ್ಯವಾಯಿತು ಎಂದು ಮದನ್ ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News