ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2019-04-24 15:27 GMT

ಉಡುಪಿ, ಎ.24: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಎ.27ರಂದು ಬೆಳಗ್ಗೆ 11ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರ, 29ರಂದು ಬೆಳಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ ಹಾಗೂ 30ರಂದು ಬೆಳಗ್ಗೆ 11ರಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರಲ್ಲಿ ದೂರು ಸ್ವೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಕರ್ನಾಟಕ ಲೋಕಾಯುಕ್ತ ಉಡುಪಿ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ:0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂ.ಸಂಖ್ಯೆ:0820-2536661 ಇವರನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News