ಕುಡಿಯುವ ನೀರು: ಎ. 25ರಂದು ಸಭೆ

Update: 2019-04-24 17:08 GMT

ಉಡುಪಿ, ಎ.24: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಸಭೆಯಲ್ಲಿ ಉಡುಪಿಯಲ್ಲಿ ಕುಡಿಯುವ ನೀರಿನ ಸದ್ಯದ ಸ್ಥಿತಿ-ಗತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮದ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳ ಲಾಗುವುದು. ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡುವ ಕುರಿತೂ ಪರಿಶೀಲಿಸಲಾಗುವುದು ಎಂದರು.

ಬಜೆ ಅಣೆಕಟ್ಟಿನಲ್ಲಿ ಸದ್ಯಕ್ಕೆ ಇರುವ ನೀರು 15 ದಿನಗಳಿಗೆ ಸಾಲುವಷ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಮಳೆ ಬರುವವರೆಗೆ ನಗರಕ್ಕೆ ನೀರು ನೀಡುವ ಕುರಿತು ಕೈಗೊಳ್ಳಬೇಕಾದ ತುರ್ತು ಕ್ರಮದ ಬಗ್ಗೆಯೂ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಮರಳು ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈಗಾಗಲೇ ನಾನ್‌ಸಿಆರ್‌ಝಡ್ ವ್ಯಾಪ್ತಿಯಲ್ಲಿ ಕುಂದಾಪುರದ ಎರಡು ಮರಳು ದಿಬ್ಬದ ಟೆಂಡರ್ ಬಗ್ಗೆ ಒಂದು ತಿಂಗಳ ಹಿಂದೆಯೇ ರಾಜ್ಯದ ಸ್ಕೃಿನಿಂಗ್ ಕಮಿಟಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಮುಂದುವ ರಿಯುವಂತೆ ಅಲ್ಲಿಂದ ಸೂಚನೆ ಬಂದಿದೆ. ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿಆರ್‌ಝಡ್ ವ್ಯಾಪ್ತಿಯ ಮರಳು ದಿಬ್ಬದ ಕುರಿತಂತೆ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News