ಎ. 27ರಿಂದ ಕುಪ್ಪಿಲ ದೈವಸ್ಥಾನದಲ್ಲಿ ದೈವಗಳ ಪುನರ್ ಪ್ರತಿತಿಷ್ಠೆ, ಬ್ರಹ್ಮಕಲಶೋತ್ಸವ

Update: 2019-04-24 17:29 GMT

ಬಂಟ್ವಾಳ, ಎ. 24: ಬಿ.ಮೂಡಗ್ರಾಮದ ಕುಪ್ಪಿಲದಲ್ಲಿ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡಿರುವ ಶ್ರೀ ರಕ್ತೇಶ್ವರೀ ದೇವಿ ಹಾಗೂ ಶ್ರೀ ಗುಳಿಗ ದೈವಸ್ಥಾನದಲ್ಲಿ ದೈವಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಎ. 27ರಿಂದ 29 ರವರೆಗೆ ನಡೆಯಲಿದೆ ಎಂದು ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ ಕುಪ್ಪಿಲಗುತ್ತು ತಿಳಿಸಿದ್ದಾರೆ.

ಮಂಗಳವಾರ ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂತ್ರಿವರ್ಯರಾದ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ಎ.27ರಂದು ವಿವಿಧ ವೈಧಿಕ ವಿಧಿವಿಧಾನಗಳು ನಡೆಯಲಿದ್ದು, ಎ. 29ರಂದು ಶ್ರೀರಕ್ತೇಶ್ವರೀ ದೇವಿ ಹಾಗೂ ಗುಳಿಗ ದೈವದ ಪ್ರತಿಷ್ಠೆ ಮತ್ತು ದ್ರವ್ಯ ಕಲಶಾಭಿಷೇಕ ನಡೆಯಲಿದೆ ಎಂದರು.

ಸಂಜೆ ಬಾಲಗೋಕುಲದ ಮತ್ತು ಅಂಗನವಾಡಿ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಒಡಿಯೂರುಶ್ರೀಗಳು ಆಶೀರ್ವಚನ ನೀಡಲಿದ್ದು, ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ ಭಟ್ ಅವರು ಧಾರ್ಮಿಕಸಭೆಯನ್ನು ಉದ್ಘಾಟಿಸುವರು.

ಎಂ.ಪುರುಷೋತ್ತಮ ಕೊಟ್ಟಾರಿ ಧಾರ್ಮಿಕ ಉಪನ್ಯಾಸ ನೀಡುವರು. ಶಾಸಕ ಯು.ರಾಜೇಶ್ ನಾಯ್ಕ್, ಮಾಜಿಸಚಿವ ರಮಾನಾಥ ರೈ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ರಾತ್ರಿ ದೈವಗಳ ನೇಮೋತ್ಸವ ಜರಗಲಿದೆ ಎಂದ ಅವರು, ಎ.25 ರಂದು ಬಿ.ಸಿ.ರೋಡಿನ ಪೊಳಲಿ ದ್ವಾರದ ಬಳಿಯಿಂದ ಹಸಿರು ಹೊರಕಾಣಿಕೆಯ ಮೆರವಣಿಗೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಕೃಷ್ಣ ಆಳ್ವ ಪೊನ್ನೋಡಿ, ಸಂಚಾಲಕ ರಮಾನಾಥ ರೈ ಕುಪ್ಪಿಲಗುತ್ತು, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಗೋಳಿನೆಲ, ಜೊತೆ ಕಾರ್ಯದರ್ಶಿ ದಯಾನಂದ ಕೆ.ಎಸ್., ಕೋಶಾಧಿಕಾರಿ ಗಣೇಶದಾಸ್ ಮಿತ್ತಪರಾರಿ, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News