ಕೊನೆಗೂ ಕುತೂಹಲಕ್ಕೆ ತೆರೆ: ವಾರಣಾಸಿಯಲ್ಲಿ ಮೋದಿ ವಿರುದ್ಧ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್

Update: 2019-04-25 07:25 GMT

ವಾರಣಾಸಿ, ಎ.25: ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆಯೇ ಎನ್ನುವ ಕುತೂಹಲಕ್ಕೆ ಕಾಂಗ್ರೆಸ್ ತೆರೆ ಎಳೆದಿದೆ. ಈ ಹೈ ವೋಲ್ಟೇಜ್ ಕ್ಷೇತ್ರದಿಂದ ಕಾಂಗ್ರೆಸ್ 2014ರ ಅಭ್ಯರ್ಥಿ ಅಜಯ್ ರೈಯವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ವಾರಣಾಸಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ನಂತರ ಕಾಂಗ್ರೆಸ್ ಈ ನಿರ್ಧಾರ ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News