ಮೈತ್ರಿ ಸರಕಾರ ಬೀಳುವ ಆತಂಕವಿಲ್ಲ: ಉಪಮುಖ್ಯಮಂತ್ರಿ ಪರಮೇಶ್ವರ್

Update: 2019-04-25 12:54 GMT

ಬೆಂಗಳೂರು, ಎ. 25: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ನಮಗೆ ಯಾವುದೇ ಆತಂಕವೂ ಇಲ್ಲ. ಮೃತ್ರಿ ಸರಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮೈತ್ರಿ ಸರಕಾರ ಬೀಳಲಿದೆ ಎಂದು ಹೇಳುತ್ತಿದ್ದಾರೆ. ಆದರೆ, ಮೈತ್ರಿ ಸರಕಾರಕ್ಕೆ ಯಾವುದೇ ಆತಂಕವಿಲ್ಲ ಎಂದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದ ಅವರು, ಮೈತ್ರಿ ಸರಕಾರ ಬೀಳುವುದೂ ಇಲ್ಲ, ಹೀಗಾಗಿ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತದ ಬಗ್ಗೆ ಗಮನ ಕೊಡುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಆಡಳಿತ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ರಾಜ್ಯ ಚುನಾವಣೆ ಆಯೋಗಕ್ಕೆ ನೀತಿ ಸಂಹಿತೆ ಸಡಿಲಿಸಲು ಮನವಿ ಮಾಡಲು ಚರ್ಚಿಸಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News