ಮೂವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ

Update: 2019-04-25 13:16 GMT

ಬೆಂಗಳೂರು, ಎ. 25: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದನ್ವಯ ವರ್ಗಾವಣೆ ಮಾಡಿದ್ದ ಮೂರು ಮಂದಿ ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಗಂಗಾರಾಮ್ ಬಡೇರಿಯಾ-ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಡಾ.ಎಸ್.ಬಿ. ಬೊಮ್ಮನಹಳ್ಳಿ- ನಿರ್ದೇಶಕರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಕ್ರಂ ಪಾಷಾ- ಆಯುಕ್ತರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಲ್ಲಿಗೆ ನಿಯೋಜನೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News