ರಕ್ಷಣಾ ಕಾರ್ಯದರ್ಶಿ ರಾಜೀನಾಮೆ

Update: 2019-04-25 17:30 GMT

ಕೊಲಂಬೊ, ಎ. 25: ರವಿವಾರ ನಡೆದ ಭಯೋತ್ಪಾದಕ ದಾಳಿಯ ಹೊಣೆಯನ್ನು ಹೊತ್ತು ನಾನು ರಾಜೀನಾಮೆ ನೀಡಿದ್ದೇನೆ ಎಂದು ಶ್ರೀಲಂಕಾದ ರಕ್ಷಣಾ ಕಾರ್ಯದರ್ಶಿ ಹೇಮಸಿರಿ ಫೆರ್ನಾಂಡೊ ಗುರುವಾರ ‘ರಾಯ್ಟರ್ಸ್’ ಸುದ್ದಿ ಸಂಸ್ಥೆಗೆ ತಿಳಿಸಿದರು.

ವೈಯಕ್ತಿಕವಾಗಿ ನನ್ನ ಕಡೆಯಿಂದ ಯಾವುದೇ ವೈಫಲ್ಯ ಸಂಭವಿಸಿಲ್ಲ, ಆದರೆ, ರಕ್ಷಣಾ ಕಾರ್ಯದರ್ಶಿಯಾಗಿ ನನ್ನ ನೇತೃತ್ವದ ಕೆಲವು ಸಂಸ್ಥೆಗಳ ವೈಫಲ್ಯಗಳಿಗೆ ನಾನು ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News