ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದಿಲ್ಲಿಗೆ ವಾಪಸ್

Update: 2019-04-26 05:44 GMT

ಹೊಸದಿಲ್ಲಿ, ಎ.26: ಪಾಟ್ನಾಕ್ಕೆ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಬೆಳಗ್ಗೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಸದಿಲ್ಲಿಗೆ ವಾಪಸಾಗಿದ್ದಾರೆ.

 ಸಮಸ್ತಿಪುರ್ (ಬಿಹಾರ), ಬಾಲಸೋರ್ (ಒಡಿಶಾ) ಮತ್ತು ಸಂಗಮನರ್ (ಮಹಾರಾಷ್ಟ್ರ)ನಲ್ಲಿ ಅವರು  ಪಕ್ಷದ ಸಭೆಗಳಲ್ಲಿ ಭಾಗವಹಿಸಬೇಕಾಗಿತ್ತು. ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News