ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ
Update: 2019-04-26 12:10 IST
ಹೊಸದಿಲ್ಲಿ, ಎ.26: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆಗೆ ಆಯ್ಕೆ ಬಯಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ವಾರಣಾಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ , ಕೇಂದ್ರ ಸಚಿವರುಗಳು ಮತ್ತು ಬಿಜೆಪಿ ನಾಯಕರು ಈ ವೇಳೆ ಮೋದಿಗೆ ಸಾಥ್ ನೀಡಿದರು.