×
Ad

ಉಡುಪಿ: ಸಿಇಟಿ ಪರೀಕ್ಷೆಗೆ 4,769 ವಿದ್ಯಾರ್ಥಿಗಳು

Update: 2019-04-26 20:50 IST

ಉಡುಪಿ, ಎ.26: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಿಗೆ ಸರಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮುಂದಿನ ಸೋಮವಾರ ಮತ್ತು ಮಂಗಳವಾರ ಜಿಲ್ಲೆಯ 11 ಪರೀಕ್ಷಾ ಕೇಂದ್ರ ಗಳಲ್ಲಿ ನಡೆಯಲಿವೆ. ಈ ಬಾರಿ ಒಟ್ಟು 4,769 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಯು ಸುಬ್ರಹ್ಮಣ್ಯ ಜೋಷಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಆರು ಪರೀಕ್ಷಾ ಕೇಂದ್ರಗಳಿದ್ದರೆ, ಕುಂದಾಪುರದಲ್ಲಿ ಮೂರು ಮತ್ತು ಕಾರ್ಕಳದಲ್ಲಿ ಎರಡು ಪರೀಕ್ಷಾ ಕೇಂದ್ರಗಳಿವೆ. ಉಡುಪಿಯಲ್ಲಿ ಪೂರ್ಣಪ್ರಜ್ಞ ಪಿಯು ಕಾಲೇಜು, ಎಂಜಿಎಂ ಪಿಯು ಕಾಲೇಜು, ಬಾಲಕಿ ಯರ ಸರಕಾರಿ ಪಿಯು ಕಾಲೇಜು, ವಿದ್ಯೋದಯ ಪಿಯು ಕಾಲೇಜು, ಸರಕಾರಿ ಪಿಯು ಕಾಲೇಜು ಹಾಗೂ ಮಣಿಪಾಲ ಪ.ಪೂ.ಕಾಲೇಜು ೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಅದೇ ರೀತಿ ಕುಂದಾಪುರದ ಸರಕಾರಿ ಪ.ಪೂ.ಕಾಲೇಜು, ಆರ್.ಎನ್.ಶೆಟ್ಟಿ ಪ.ಪೂ.ಕಾಲೇಜು ಹಾಗೂ ಭಂಡಾರ್‌ಕಾರ್ಸ್‌ ಪ.ಪೂ. ಕಾಲೇಜು, ಕಾರ್ಕಳದ ಸರಕಾರಿ ಪ.ಪೂ.ಕಾಲೇಜು ಮತ್ತು ಭುವನೇಂದ್ರ ಪಿ.ಯು.ಕಾಲೇಜು ಕೇಂದ್ರ ದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಬೇಕಾದ ಎಲ್ಲಾ ಪೂರ್ವ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಎ.29ರಂದು ಜೀವಶಾಸ್ತ್ರ ಮತ್ತು ಗಣಿತ ಶಾಸ್ತ್ರ ಹಾಗೂ ಎ.30ರಂದು ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ ಎಂದು ಸುಬ್ರಹ್ಮಣ್ಯ ಜೋಷಿ ತಿಳಿಸಿದರು.

ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಗುರುವಾರ ಎಡಿಸಿ ವಿದ್ಯಾಕುಮಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, ಇದರಲ್ಲಿ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳ ಕುರಿತು ಚರ್ಚಿಸಿ ಸೂಕ್ತ ನಿರ್ದೇಶಗಳನ್ನು ನೀಡಲಾಗಿದೆ.ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಿಬ್ಬಂದಿಗಳಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ ಎಂದು ಜೋಷಿ ವಿವರಿಸಿದರು.

ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲೂ ಸಿಸಿಟಿವಿಯನ್ನು ಅಳವಡಿಸಲಾ ಗಿದೆ. ಪ್ರತಿಯೊಂದು ಕೇಂದ್ರದಲ್ಲೂ ಕುಡಿಯುವ ನೀರು ಸೇರಿದಂತೆ ಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಪರೀಕ್ಷಾರ್ಥಿಗಳು ಯಾವುದೇ ರೀತಿಯ ಕೈಗಡಿಯಾರ ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಹಾಲ್ ಒಳಗೆ ತರುವಂತಿಲ್ಲ. ಪ್ರತಿ ಹಾಲ್‌ನಲ್ಲೂ ಸರಿಯಾದ ಸಮಯ ತೋರಿಸುವ ದೊಡ್ಡ ಗೋಡೆ ಗಡಿಯಾರವು ಇರುತ್ತದೆ ಎಂದವರು ಹೇಳಿದರು.

ನಿಷೇದಾಜ್ಞೆ: ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಎ.29 ಮತ್ತು 30 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಯಾವುದೇ ಅಕ್ರಮ, ಅವ್ಯವಹಾರಗಳಿಲ್ಲದೇ ದೋಷ ರಹಿತವಾಗಿ ನಡೆಯಲು, ನಿಗದಿತ ಎಲ್ಲಾ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಸುತ್ತಲಿನ 200 ಮೀ. ಪ್ರದೇಶ ವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಸೆಕ್ಷನ್ 144(1) ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಎ.29 ಮತ್ತು 30 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಯಾವುದೇ ಅಕ್ರಮ, ಅವ್ಯವಹಾರಗಳಿಲ್ಲದೇ ದೋಷ ರಹಿತವಾಗಿ ನಡೆಯಲು, ನಿಗದಿತ ಎಲ್ಲಾ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಸುತ್ತಲಿನ 200 ಮೀ. ಪ್ರದೇಶ ವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಸೆಕ್ಷನ್ 144(1) ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.

‘ಅನುತ್ತೀರ್ಣರಾದರೂ ಸಿಇಟಿ ಬರೆಯಿರಿ’

ಇದೇ ಮೊದಲ ಬಾರಿ ಸಿಇಟಿ ಪರೀಕ್ಷೆಗೆ ಮೊದಲು ದ್ವಿತೀಯ ಪಿಯುಸಿ ಫಲಿತಾಂಶ ಬಂದಿರುವುದರಿಂದ, ವಿಜ್ಞಾನ ವಿಭಾಗದಲ್ಲಿ ಒಂದು ಅಥವಾ ಹೆಚ್ಚು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕೇ, ಬೇಡವೇ ಎಂಬ ಬಗ್ಗೆ ಸಂಬಂಧಿತ ವಿದ್ಯಾರ್ಥಿ ಹಾಗೂ ಹೆತ್ತವ ರಲ್ಲಿ ಆತಂಕ ಮತ್ತು ಗೊಂದಲ ಹುಟ್ಟುಹಾಕಿದೆ. ಈ ಬಗ್ಗೆ ಕಾಲೇಜು ಮತ್ತು ವಿದ್ಯಾರ್ಥಿ-ಹೆತ್ತವರಿಂದ ಪ.ಪೂ.ಶಿಕ್ಷಣ ಮಂಡಳಿಗೆ ದೂವಾಣಿ ಸತತ ಕರೆಗಳು ಬರುತ್ತಿವೆ.

ಈ ಬಗ್ಗೆ ರಾಜ್ಯ ಪದವಿ ಪೂರ್ವ ಶಿಕ್ಷಣ ಮಂಡಳಿಯ ಹಿರಿಯ ಅಧಿಕಾರಿ ಯೊಬ್ಬರ ಬಳಿ ಸ್ಪಷ್ಟೀಕರಣ ಕೇಳಿದಾಗ, ಒಂದೆರಡು ವಿಷಯಗಳಲ್ಲಿ ಅನುತ್ತೀರ್ಣ ಗೊಂಡ ವಿದ್ಯಾರ್ಥಿಗಳು ಸೇರಿದಂತೆ ಸಿಇಟಿ ಪರೀಕ್ಷೆ ಕಟ್ಟಿರುವ ಎಲ್ಲಾ ವಿದ್ಯಾರ್ಥಿ ಗೂ ಪರೀಕ್ಷೆ ಬರೆಯಬೇಕು ಎಂದರು.

ಅನುತ್ತೀರ್ಣಗೊಂಡವರಿಗೆ ಸಪ್ಲಿಮೆಂಟರಿ ಪರೀಕ್ಷೆಗಳು ಮೇ ಕೊನೆಯ ವಾರ -ಜೂನ್ ಮೊದಲ ವಾರದಲ್ಲಿ ನಡೆಯಲಿದೆ. ಇದರಲ್ಲಿ ಅನುತ್ತೀರ್ಣಗೊಂಡ ವಿಷಯಗಳಲ್ಲಿ ತೇರ್ಗಡೆಗೊಂಡರೆ, ಅಂಥವರ ಮಾರ್ಕನ್ನು ಸಿಇಟಿ ರ್ಯಾಂಕ್ ನೀಡುವ ವೇಳೆ ಪರಿಗಣಿಸಲಾಗುತ್ತದೆ. ಹೀಗಾಗಿ ಅವರು ಉಳಿದವರಂತೆ ಸಿಇಟಿ ರ್ಯಾಂಕ್ ಮೂಲಕ ರಾಜ್ಯದಲ್ಲಿ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗುತ್ತದೆ ಎಂದು ಈ ಅಧಿಕಾರಿ ತಿಳಿಸಿದ್ದಾರೆ.

ಹೀಗಾಗಿ ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣ ಗೊಂಡವರೂ ಎ.29,30ರ ಸಿಇಟಿ ಪರೀಕ್ಷೆಯನ್ನು ಬರೆಯುಂತೆ ಅವರು ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News