×
Ad

ಹಿರಿಯಡ್ಕ: ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2019-04-26 20:53 IST

ಉಡುಪಿ, ಎ.26: ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕದ ವತಿಯಿಂದ ಕುಕ್ಕುದಕಟ್ಟೆಯಲ್ಲಿ ಇತ್ತೀಚೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸತ್ಯಶಂಕರ್ ಅವರು ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಕ್ಷಯರೋಗ, ಸಾಂಕ್ರಾಮಿಕ ರೋಗಗಳ ಬಗ್ಗೆ ತೆಗೆದುಕೊಳ್ಳಬೇಕಾದ ಎಚ್ಚರಿಕೆಯ ಕುರಿತು ವಿವರಿಸಿ ಆರೋಗ್ಯ ತಪಾಸಣೆ ನಡೆಸಿದರು.

ಸ್ಥಳೀಯರಾದ ರಜನಿ ನಾಯಕ್ ಮಾತನಾಡಿ, ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಲು ತಿಳಿಸಿ, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.

ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಯಿತು. ಶಿಬಿರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶ್ಯಾಮಲ, ನೇತ್ರ ಸಹಾಯಕಿ ನೀತಾ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಾ ಬಾಯಿ ಕೆ ಸ್ವಾಗತಿಸಿದರು. ಹಿರಿಯ ಮಹಿಳಾ ಆರೊೀಗ್ಯ ಸಹಾಯಕಿ ತುಳಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News