ಮೈತ್ರಿ ಸರಕಾರದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ಬಿಜೆಪಿ ಮುಖಂಡ ಆರ್.ಅಶೋಕ್

Update: 2019-04-26 16:26 GMT

ಬೆಂಗಳೂರು, ಎ. 26: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಉಳಿಸುವುದು ಅಥವಾ ಬಿಡುವುದು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಬಿಟ್ಟಿದ್ದು, ಈ ಸರಕಾರದ ಬಗ್ಗೆ ನಾವು ಯಾವುದೇ ಕಾರಣಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ಪಕ್ಷದ ಕಚೆರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರವನ್ನು ಕೆಡವಲು ಕಾಂಗ್ರೆಸಿಗರ ಒಂದು ಗುಂಪು ತುದಿಗಾಲಲ್ಲಿ ನಿಂತಿದೆ. 20ಕ್ಕೂ ಹೆಚ್ಚು ಶಾಸಕರು ಸಿಎಂ ಕುಮಾರಸ್ವಾಮಿ ವಿರುದ್ದ ಸಿಡಿದೆದ್ದಿದ್ದಾರೆ. ತಮ್ಮ ವೈಫಲ್ಯ ಮರೆಮಾಚಲು ಆಪರೇಷನ್ ಕಮಲ ಆರೋಪ ಸರಿಯಲ್ಲ ಎಂದು ಆಕ್ಷೇಪಿಸಿದರು.

ನಾವು ಯಾವುದೇ ಆಪರೇಷನ್ ಕಮಲ ನಡೆಸುವುದಿಲ್ಲ. ಯಾವ ಶಾಸಕರಿಗೂ ಗಾಳ ಹಾಕುವ ಅಗತ್ಯವೂ ಇಲ್ಲ. ಈಗಾಗಲೇ ಅನೇಕ ಶಾಸಕರು ಸರಕಾರದ ವರ್ತನೆಯಿಂದ ಬೇಸತ್ತು ಹೊರಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮೇ 23ರ ಫಲಿತಾಂಶದವರೆಗೂ ಕಾದುನೋಡಿ ಎಂದು ಹೇಳಿದರು.

ಮೈತ್ರಿ ಸರಕಾರ ಯಾವುದೇ ಕಾರಣಕ್ಕೂ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದಿಲ್ಲ. ಅವರ ಆಂತರಿಕ ಕಚ್ಚಾಟದಿಂದಲೇ ಸರಕಾರ ಬಿದ್ದು ಹೋಗುತ್ತದೆ. ಅಧಿಕೃತ ವಿರೋಧ ಪಕ್ಷವಾಗಿ ನಾವು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ಅಶೋಕ್ ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News