ಸಾಲುಮರದ ತಿಮ್ಮಕ್ಕ, ರಾಮಕೃಷ್ಣ ಮಿಷನ್‌ಗೆ ರೋಟರಿ ವಂದನಾ ಪ್ರಶಸ್ತಿ ಪ್ರದಾನ
ಮಂಗಳೂರು, ಎ. 26: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ವಾರ್ಷಿಕ ಪ್ರತಿಷ್ಠಿತ ವಂದನಾ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಹಾಗೂ ರಾಮಕೃಷ್ಣ ಮಿಷನ್ ಸಂಸ್ಥೆಗೆ ನೀಡಲಾಯಿತು. ರಾಮಕೃಷ್ಣ ಮಿಷನ್ ಪರವಾಗಿ ಜಿತಕಾಮಾನಂದ ಸ್ವಾಮೀಜಿ ಪ್ರಶಸ್ತಿ ಸ್ವೀಕರಿಸಿದರು.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪರಿಸರ ಸಂರಕ್ಷಣೆಗೆ ಸಲ್ಲಿಸಿದ ಸುದೀರ್ಘ ಮತ್ತು ಅನುಪಮ ಸೇವೆ ಹಾಗೂ ನೀಡಿದ ಅಮೂಲ್ಯ ಕೊಡುಗೆ, ಗಣನೀಯ ಸಾಧನೆಯನ್ನು ಪರಿಗಣಿಸಿ ನೀಡಲಾಗುವ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಂದನಾ ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ದೇವದಾಸ್ ರೈ, ರೋಟರಿ ಅಧ್ಯಕ್ಷ ಸಂತೋಷ್ ಶೇಟ್, ರೋಟರ್ಯಾಕ್ಟ್ ಅಧ್ಯಕ್ಷ ಗಣೇಶ್ ಜಿ.ಟಿ., ಜೋಯೆಲ್ ಲೋಬೊ, ಜಯರಾಂ ಪೂಂಜಾ, ರಾಜಗೋಪಾಲ ರೈ, ರೇಮಂಡ್ ಡಿಕುನ್ಹಾ ಮತ್ತಿತರರು ಪಾಲ್ಗೊಂಡಿದ್ದರು.