×
Ad

ಎ.29: ಮಂಗಳೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ

Update: 2019-04-27 17:56 IST

ಮಂಗಳೂರು, ಎ.27: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯು ಎ.29ರಂದು ಪೂ.11ಗಂಟೆಗೆ ನಗರದ ಪತ್ರಿಕಾಭವನದಲ್ಲಿ ಜರುಗಲಿದೆ. ದ.ಕ.ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು.

ದ.ಕ.ಜಿಪಂ ಸಿಇಒ ಡಾ.ಸೆಲ್ವಮಣಿ ಆರ್., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಮೊದಲ ಬಾರಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಕಾರ್ಯಕಾರಿ ಸಮಿತಿಯು ಸಭೆಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು, ವಿವಿಧ ಜಿಲ್ಲಾ ಸಮಿತಿಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ರಾಜ್ಯ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News