×
Ad

29,30ಕ್ಕೆ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಂಭವ

Update: 2019-04-27 18:18 IST

ಉಡುಪಿ, ಎ.27: ಹಿಂದು ಮಹಾಸಾಗರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಫನಿ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕರಾವಳಿಯಲ್ಲಿ ಎ.29, 30ರಂದು ಗುಡುಗು- ಮಿಂಚು ಸಹಿತ ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಭಾರತ ಹವಾಮಾನ ವಿಭಾಗವನ್ನು ಉಲ್ಲೇಖಿಸಿ ಬೆಂಗಳೂರಿನ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಪ್ರತಿ ಗಂಟೆಗೆ 40ರಿಂದ 50ಕಿ.ಮೀ. ವೇಗದ ಗಾಳಿಯೊಂದಿಗೆ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಜಿಲ್ಲೆಯ ಅಲ್ಲಲ್ಲಿ ಸಿಡಿಲು ಬಡಿಯುವ ಸಂಭವವೂ ಇದೆ. ಗಾಳಿಯೊಂದಿಗೆ ಜಿಲ್ಲೆಯ ನಾನಾ ಕಡೆಗಳಲ್ಲಿ ಮಳೆ ಸುರಿಯುವ ಸಂಭವವೂ ಇದೆ ಎಂದು ಇಲಾಖೆ ಹವಾಮಾನ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News