ಎ.28: ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

Update: 2019-04-27 14:23 GMT

ಬೆಂಗಳೂರು, ಎ. 27: ಲೋಕಸಭೆ ಚುನಾವಣೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ(ಎ.28) ನಗರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ನಾಳೆ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಹೇಳಿಕೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಎದುರಿಸಿದ್ದು, ಮೈತ್ರಿ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದ ಬಗ್ಗೆಯೂ ಚರ್ಚಿಸಲಾಗುವುದು. ಅಲ್ಲದೆ, ರಾಜ್ಯದಲ್ಲಿನ ಬರ, ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಿದ್ದಾರೆಂದು ಗೊತ್ತಾಗಿದೆ.

ಸಭೆಯಲ್ಲಿ ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಜೆಡಿಎಸ್ ಸಚಿವರು, ಶಾಸಕರು ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News