×
Ad

ಚಿಂಚೋಳಿ, ಕುಂದಗೋಳ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್

Update: 2019-04-27 21:29 IST

ಬೆಂಗಳೂರು, ಎ.27: ಮೇ 19 ರಂದು ರಾಜ್ಯದ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು. ಚಿಂಚೋಳಿ ಕ್ಷೇತ್ರ ಅಭ್ಯರ್ಥಿಯಾಗಿ ಸುಭಾಷ್ ರಾಥೋಡ್ ಹಾಗೂ ಕುಂದಗೋಳ ವಿಧಾನಸಭೆ ಕ್ಷೇತ್ರಕ್ಕೆ ಸಿ.ಎಸ್.ಶಿವಳ್ಳಿ ಪತ್ನಿ ಕುಸುಮಾವತಿ ಶಿವಳ್ಳಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಕಲಬುರಗಿ ಜಿಲ್ಲೆಯ ಚಿಂಚೋಳಿ ಹಾಗೂ ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾಗಿರುವ ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ಮೇ19 ರಂದು ಉಪಚುನಾವಣೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News