×
Ad

ಕುತ್ಪಾಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲನೆ

Update: 2019-04-28 18:12 IST

ಉಡುಪಿ, ಎ.28: ಉಡುಪಿಯ ಕುತ್ಪಾಡಿ ವಾರ್ಡ್‌ಗೆ ರವಿವಾರ ಭೇಟಿ ನೀಡಿದ ಉಡುಪಿ ಶಾಸಕ ಕೆ.ರಘುಪತಿ ಭಟ್ ಸ್ಥಳೀಯ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಿದರು.

ಈ ಪ್ರದೇಶದಲ್ಲಿ ಬಾವಿ ನಿರ್ಮಿಸಲು ಇರುವ ಸಮಸ್ಯೆಯನ್ನು ವೀಕ್ಷಿಸಿದ ರಘುಪತಿ ಭಟ್, ಕೂಡಲೇ ಸಮಸ್ಯೆ ಬಗೆಹರಿಸಿ ಕಾಮಗಾರಿ ಪ್ರಾರಂಭಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಕಡೆಕಾರ್ ಗ್ರಾಪಂ ಅಧ್ಯಕ್ಷ ರಘುನಾಥ್ ಕೋಟ್ಯಾನ್, ಜಿತೇಂದ್ರ ಶೆಟ್ಟಿ ಹಾಗೂ ಸ್ಥಳೀಯರಾದ ರಾಕೇಶ್, ಚಂದು, ಯೋಗೀಶ್ ಅಶ್ವಥ್, ಅರವಿಂದ್ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News