ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಎಚ್.ಡಿ.ದೇವೇಗೌಡ

Update: 2019-04-28 16:28 GMT

ಬೆಂಗಳೂರು, ಎ.24: ರಾಜ್ಯದಲ್ಲಿ ಸಾರ್ವತ್ರಿಕ ಲೋಕಸಭೆ ಚುನಾವಣೆ ಬಳಿಕ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ರವಿವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಿಎಂ ಕುಮಾರ್‌ಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಿತು.

ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಯಿತು. ಲೋಕಸಭೆ ಚುನಾವಣೆ, ಅದರ ಫಲಿತಾಂಶದ ಲೆಕ್ಕಾಚಾರ ಕುರಿತು ಚರ್ಚೆ ನಡೆಯಿತು. ಮಂಡ್ಯ ಕ್ಷೇತ್ರದಲ್ಲಿ ಕೆಲವು ಕಡೆ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಲಿದೆ ಎಂಬ ವರದಿಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಆಪರೇಷನ್ ಕಮಲ, ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆಯ ಪರಿಣಾಮಗಳ ಕುರಿತೂ ಚರ್ಚೆ ನಡೆಯಿತು.

ಶಾಸಕರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಲೋಕಸಭೆಯ ಚುನಾವಣೆಯ ಫಲಿತಾಂಶದ ಬಗ್ಗೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯತ್ತ ಗಮನ ಹರಿಸಬೇಕೆಂದು ತಮ್ಮ ಶಾಸಕರಿಗೆ ಕರೆ ನೀಡಿದ್ದಾರೆ. ವಿರೋಧ ಪಕ್ಷಗಳು ರೈತರ ಸಾಲಮನ್ನಾ ಬಗ್ಗೆ ಅಪಪ್ರಚಾರವನ್ನು ಮಾಡುತ್ತಿವೆ. ಆದರೆ, ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರ ಇನ್ನಾರು ತಿಂಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿ ಋಣಮುಕ್ತ ಪತ್ರವನ್ನು ಕೊಡಲಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯರು ಹಾಗೂ ಶಾಸಕರುಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News