×
Ad

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಪ್ಲೇ-ಆಫ್‌ಗೆ ಲಗ್ಗೆ

Update: 2019-04-28 23:48 IST

ಜೈಪುರ, ಎ.28: ರಾಜಸ್ಥಾನ ರಾಯಲ್ಸ್ ತಂಡ ಶನಿವಾರ ರಾತ್ರಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಈ ವರ್ಷದ ಐಪಿಎಲ್ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದೆ. ರಾಜಸ್ಥಾನ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ-ಆಫ್‌ಗೆ ತೇರ್ಗಡೆಯಾಗಿದೆ. 12 ಪಂದ್ಯಗಳಲ್ಲಿ 16 ಅಂಕ ಗಳಿಸಿರುವ ಚೆನ್ನೈ ತಂಡ ಅಂಕಪಟ್ಟಿಯಲ್ಲಿ ಅಗ್ರ 4ರಲ್ಲಿ ಸ್ಥಾನ ಕಾಯ್ದುಕೊಂಡಿಲ್ಲದೆ ಈ ವರ್ಷದ ಐಪಿಎಲ್‌ನಲ್ಲಿ ಪ್ಲೇ-ಆಫ್‌ಗೆತೇರ್ಗಡೆಯಾದ ಮೊದಲ ತಂಡ ಎನಿಸಿಕೊಂಡಿದೆ. ಧೋನಿ ಪಡೆ ಇನ್ನುಳಿದ 2 ಲೀಗ್ ಪಂದ್ಯಗಳಲ್ಲಿ ಸೋಲನುಭವಿಸಿದರೂ ಅಗ್ರ-4ರಲ್ಲಿ ತನ್ನ ಸ್ಥಾನ ಕಾಯ್ದುಕೊಳ್ಳಲಿದೆ.

ಎರಡು ವರ್ಷಗಳ ನಿಷೇಧದ ಬಳಿಕ ಐಪಿಎಲ್‌ಗೆ ವಾಪಸಾದ ಚೆನ್ನೈ ಸತತ ಎರಡನೇ ಬಾರಿ ಪ್ಲೇ-ಆಫ್‌ಗೆ ತೇರ್ಗಡೆಯಾಗಿದೆ. ಇದೇ ವೇಳೆ ಐಪಿಎಲ್ ಇತಿಹಾಸದಲ್ಲಿ ಪ್ರತಿ ಐಪಿಎಲ್‌ನಲ್ಲಿ ಅಗ್ರ-4 ಸ್ಥಾನ ಕಾಯ್ದುಕೊಂಡ ಏಕೈಕ ತಂಡವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಶನಿವಾರ ಭರ್ಜರಿ ಜಯ ಸಾಧಿಸಿರುವ ರಾಜಸ್ಥಾನ ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಹಿಂದಿಕ್ಕಿ ಆರನೇ ಸ್ಥಾನಪಡೆದಿದೆ. ಕೋಲ್ಕತಾ ಹಾಗೂ ಬೆಂಗಳೂರು ಅಂಕಪಟ್ಟಿಯಲ್ಲಿ ಕ್ರಮವಾಗಿ ಏಳನೇ ಹಾಗೂ 8ನೇ ಸ್ಥಾನದಲ್ಲಿವೆ. ಸತತ 6 ಪಂದ್ಯಗಳಲ್ಲಿ ಸೋತಿರುವ ಕೋಲ್ಕತಾ ತನ್ನ ಅದೃಷ್ಟ ಬದಲಾಗಿ ಅಗ್ರ-4ರಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಆರ್‌ಸಿಬಿ ತಂಡ ರವಿವಾರ 8ನೇ ಸೋಲು ಕಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News