ಶಂಸುಲ್ ಉಲಮಾ ಮೌಲಿದ್ ಮಜ್ಲಿಸ್ ಹಾಗೂ ರಮಳಾನ್ ಸ್ವಾಗತ ಕಾರ್ಯಕ್ರಮ

Update: 2019-04-28 18:56 GMT

ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ವತಿಯಿಂದ ಶಂಸುಲ್ ಉಲಮಾ ಮೌಲಿದ್ ಮಜ್ಲಿಸ್ ಹಾಗೂ ರಮಳಾನ್ ಸ್ವಾಗತ ಕಾರ್ಯಕ್ರಮ

ದೇರಳಕಟ್ಟೆ: ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆಯ ವತಿಯಿಂದ ಶಾಖಾ ಕಚೇರಿಯಲ್ಲಿ ಶಂಸುಲ್ ಉಲಮಾ ಮೌಲಿದ್ ಮಜ್ಲಿಸ್  ಹಾಗೂ ರಮಳಾನ್ ಸ್ವಾಗತ ಕಾರ್ಯಕ್ರಮ ನಡೆಯಿತು.

ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖಾ ಅಧ್ಯಕ್ಷರಾದ ಮುಹಮ್ಮದ್ ಇರ್ಫಾನ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿ ಸದಸ್ಯರಾದ ಬಹು ತಬೂಕ್ ದಾರಿಮಿರವರು ಮೌಲಿದ್ ಮಜ್ಲಿಸ್ ಗೆ ನೇತೃತ್ವ ವಹಿಸಿದರು. ಎಸ್ಕೆಎಸ್ಸೆಸ್ಸೆಫ್ ಮಂಗಳೂರು ವಲಯ ಸಮಿತಿ ಪ್ರದಾನ ಕಾರ್ಯದರ್ಶಿ ಹಾಫಿಲ್ ಝೈನ್ ಸಖಾಫಿ ಉಳ್ಳಾಲ ಮುಖ್ಯ ಪ್ರಭಾಷಣ ನಡೆಸಿದರು.

ಕಾರ್ಯಕ್ರಮದಲ್ಲಿ ಮಂಗಳ ನಗರ ಮಸ್ಜಿದುನ್ನೂರ್ ಮಸೀದಿ ಖತೀಬ್  ಬಹು ತ್ವಯಿಬ್ ಫೈಝಿ. ಅರಫಾ ಮಸೀದಿ ಇಮಾಮರಾದ ಇಸ್ಹಾಕ್ ಫೈಝಿ. ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಕ್ಲಸ್ಟರ್ ಸಮಿತಿ ಅಧ್ಯಕ್ಷರಾದ ಸಯ್ಯದ್ ಅಲಿ ಎಸ್ಕೆಎಸ್ಸೆಸ್ಸೆಫ್ ಮಾಜಿ ಅಧ್ಯಕ್ಷರಾದ ಹಾಜಿ ಕೆರೀಮ್ ಡಿ. ಮುಹಮ್ಮದ್ ಡಿ.ಎಂ ಮುಂತಾದ ಹಲವಾರು ಗಣ್ಯರು ಬಾಗವಹಿದರು.

ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ದೇರಳಕಟ್ಟೆ ಶಾಖೆಯ ಪ್ರದಾನ ಕಾರ್ಯದರ್ಶಿ ಮೊಹಮ್ಮದ್ ಮುನ್ಸಿದ್ ಸ್ವಾಗತಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News