ಬಿಜೆಪಿ ಪರಿಷತ್ ಸದಸ್ಯ ಮಲ್ಲಿಕಾರ್ಜುನ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಐಟಿ

Update: 2019-04-29 14:55 GMT

ಬೆಂಗಳೂರು, ಎ.29: ಬಿಜೆಪಿ ಪರಿಷತ್ ಸದಸ್ಯ ಯು.ಡಿ.ಮಲ್ಲಿಕಾರ್ಜುನ್ ವಿರುದ್ಧ ಐಟಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. 10 ಕೋಟಿ ಹಣಕ್ಕೆ ದಂಡ ಕಟ್ಟದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಆರ್ಥಿಕ ಅಪರಾಧಗಳ ಕೋರ್ಟ್‌ಗೆ ದೂರು ಸಲ್ಲಿಸಿದ್ದಾರೆ.

ಅಕ್ರಮ ಆಸ್ತಿ ಸಂಬಂಧ ದಂಡ ಕಟ್ಟುವಂತೆ ಮಲ್ಲಿಕಾರ್ಜುನ್‌ಗೆ ಐಟಿ ಅಧಿಕಾರಿಗಳು ಹೇಳಿದ್ದರು. ಈ ಸಂಬಂಧ 4 ಬಾರಿ ನೋಟಿಸ್ ಕೂಡ ನೀಡಲಾಗಿತ್ತು. ಆದರೆ ಐಟಿ ನೀಡಿದ್ದ ನೋಟಿಸ್‌ಗೆ ಮಲ್ಲಿಕಾರ್ಜುನ್ ಯಾವುದೇ ರೀತಿಯ ಉತ್ತರವನ್ನು ನೀಡಲಿಲ್ಲ. ಹೀಗಾಗಿ ಹೇಗಾದರೂ ಮಾಡಿ ದಂಡ ವಸೂಲಿ ಮಾಡಲೇಬೇಕು ಎಂದು ನಿರ್ಧರಿಸಿ ಐಟಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣದ ಹಿನ್ನೆಲೆ: ಒಂದೂವರೆ ವರ್ಷದ ಹಿಂದೆ ಮಲ್ಲಿಕಾರ್ಜುನ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನಲ್ಲಿರುವ ಜಯನಗರದ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಸಾಕಷ್ಟು ಅಕ್ರಮ ದಾಖಲೆಗಳನ್ನ ವಶ ಪಡಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಹಾಜರಾಗಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News