ಉಪ ಚುನಾವಣೆ ಬಳಿಕ ಸರಕಾರ ಪತನ: ಜಗದೀಶ್ ಶೆಟ್ಟರ್

Update: 2019-04-29 16:27 GMT

ಹುಬ್ಬಳ್ಳಿ, ಎ.29: ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ರಾಜ್ಯ ರಾಜಕಾರಣದ ದಿಕ್ಸೂಚಿಯಾಗಲಿದೆ. ಈ ಚುನಾವಣೆ ಬಳಿಕ ರಾಜ್ಯ ಸರಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದಗೋಳದಲ್ಲಿ ಈ ಬಾರಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೇ 23ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ, ರಾಜ್ಯ ರಾಜಕೀಯದಲ್ಲಿ ದೊಡ್ಡಮಟ್ಟದ ಬದಲಾವಣೆಯಾಗಲಿದ್ದು, ರಾಜ್ಯದ ಮೈತ್ರಿ ಸರಕಾರವು ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಕುಂದಗೋಳ ಜೊತೆಗೆ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಈ ಚುನಾವಣೆಯಲ್ಲಿ ಅಧಿಕಾರ, ಹಣದ ಬಲ ಕೆಲಸ ಮಾಡುವುದಿಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ನೂರು ಜನ ಬಂದರೂ ಈ ಬಾರಿ ಬಿಜೆಪಿ ಗೆಲುವು ನಿಶ್ಚಿತ. ಮೈತ್ರಿ ಸರಕಾರ ಪತನವಾದರೆ, ಅದರ ಲಾಭವನ್ನು ಖಂಡಿತವಾಗಿಯೂ ಬಿಜೆಪಿ ಪಡೆಯಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News