×
Ad

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Update: 2019-04-29 23:16 IST

ಮೈಸೂರು,ಎ.29: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂದಿರುವ 2019ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. 

2019ರ ಮಾರ್ಚ್ 16 ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಯವರು ಎಲ್ಲಾ ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರು. ಅಂದು ಶ್ರೀ ರಾಜೀವ್ ತಾರಾನಾಥ್ ಅವರು ಕಾರಣಾಂತಗಳಿಂದ ಆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಸೋಮವಾರ ಶ್ರೀ ರಾಜೀವ್ ತಾರಾನಾಥ್ ಅವರ ಸ್ವಗೃಹದಲ್ಲೇ ಪ್ರದಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ಜಿ. ಅನುರಾಧ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಎಸ್.ಎನ್.ನರಗುಂದ್ ಅವರು ಪ್ರಶಸ್ತಿ ಪ್ರದಾನ ನೆರವೇರಿಸಿ, ಗೌರವ ಸಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News