ಆಟೊ ಮೊಬೈಲ್ಸ್‌ನಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ

Update: 2019-04-29 17:51 GMT

ಬೆಂಗಳೂರು, ಎ.29: ಇಲ್ಲಿನ ಸುಬ್ರಮಣ್ಯನಗರದ ಮಿಲ್ಕ್ ಕಾಲನಿಯಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.

ಗಾಯಿತ್ರಿ ಆಟೋ ಮೊಬೈಲ್ಸ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News