ಎಸೆಸೆಲ್ಸಿ ಫಲಿತಾಂಶ : ಕುಮಟಾದ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ

Update: 2019-04-30 10:22 GMT

ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ವಿದ್ಯಾರ್ಥಿನಿ ನಾಗಂಜಲಿ ಪರಮೇಶ್ವರ ನಾಯ್ಕ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಗ್ರಾಮದ ಹುಬ್ಬುಣಗೇರಿಯ ವಿದ್ಯಾರ್ಥಿನಿಯಾದ ನಾಗಾಂಜಲಿ ಪರಮೇಶ್ವರ್ ನಾಯ್ಕ 625 ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.

ನಾಗಾಂಜಲಿ ಕುಮುಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಹೈ ಸ್ಕೂಲ್‌ ವಿದ್ಯಾರ್ಥಿನಿ. ಆಕೆಯ ತಂದೆ ವೃತ್ತಿಯಲ್ಲಿ ಟೆಂಪೋ ಡ್ರೈವರ್ ಎಂದು ತಿಳಿದುಬಂದಿದೆ.

“ನಾಗಾಂಜಲಿ ರಾಂಕ್ ಬರುತ್ತಾಳೆಂಬ ವಿಶ್ವಾಸ ನಮಗೆ ಹಾಗೂ ಅವಳಿಗೂ ಇತ್ತು. ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಹಳ ಕೂಲಂಕುಷವಾಗಿ ಅಧ್ಯಯನ ಮಾಡಿದ್ದಳು. ತುಂಬಾ ಮುಗ್ಧೆ ಹಾಗೂ ವಿಧೇಯಕ ವಿದ್ಯಾರ್ಥಿನಿ” ಎನ್ನುವುದು ಶಾಲೆಯ ಮುಖ್ಯ ಶಿಕ್ಷಕಿ ಸುಮಾ ಪ್ರಭು ಅಭಿಪ್ರಾಯಪಟ್ಟಿದ್ದಾರೆ.

ಶಾಲೆಯಲ್ಲಿ ಪ್ರತಿವರ್ಷ 90ಕ್ಕೂ ಅಧಿಕ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಬರುತ್ತಿದ್ದರು. ಶೇ. 70 ನಮ್ಮಲ್ಲಿ ಕನಿಷ್ಠ ಅಂಕ. ಈ ಬಾರಿ 129 ಮಕ್ಕಳು ಪರೀಕ್ಷೆಗೆ ಕುಳಿತಿದ್ದರು ಎಂದು ಸುಮಾ ಪ್ರಭು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News