ಉಪಚುನಾವಣೆ: ಕೆಪಿಸಿಸಿಯಿಂದ ಉಸ್ತುವಾರಿಗಳ ನೇಮಕ
Update: 2019-04-30 23:23 IST
ಬೆಂಗಳೂರು, ಎ. 30: ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಎರಡೂ ಕ್ಷೇತ್ರಗಳಿಗೂ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ.
ಕುಂದಗೋಳ ಕ್ಷೇತ್ರಕ್ಕೆ ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ನಾಲ್ವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಜಂಟಿ ಉಸ್ತುವಾರಿಗಳನ್ನಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಸಂತೋಷ್ ಲಾಡ್ ಅವರನ್ನು ನೇಮಿಸಲಾಗಿದೆ.
ಚಿಂಚೋಳಿ ಕ್ಷೇತ್ರಕ್ಕೆ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ನಾಲ್ವರನ್ನು ನೇಮಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಡಾ.ಅಜಯ್ ಸಿಂಗ್ ಅವರನ್ನು ಜಂಟಿ ಉಸ್ತುವಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ.