ಎಸ್.ಎಂ.ಕೃಷ್ಣರಿಂದ ಬಿಜೆಪಿಗೆ ಹೆಚ್ಚಿನ ಬಲ: ಯಡಿಯೂರಪ್ಪ
Update: 2019-05-01 18:26 IST
ಬೆಂಗಳೂರು, ಮೇ 1: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಬಲದಿಂದಾಗಿ ರಾಜ್ಯ ರಾಜಕಾರಣದಲ್ಲಿ ಶೀಘ್ರದಲ್ಲಿಯೆ ಭಾರೀ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬುಧವಾರ ಎಸ್.ಎಂ.ಕೃಷ್ಣರವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಡಾಲರ್ಸ್ ಕಾಲೋನಿಯ ಅವರ ನಿವಾಸಕ್ಕೆ ಭೇಟಿ ನೀಡಿ ಶುಭ ಕೋರಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಎಸ್.ಎಂ.ಕೃಷ್ಣರವರು ರಾಜ್ಯದ ನಾನಾ ಕಡೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರಿಂದ ಹೆಚ್ಚಿನ ಬಲ ಬಂದಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಈ ಬಾರಿ 22 ಸ್ಥಾನಗಳನ್ನು ಗೆಲ್ಲುವುದು ಖಚಿತ. ದೇಶದಲ್ಲಿ ಬಿಜೆಪಿ ಒಂದೇ 200 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಲಿದ್ದೇವೆ. ಎಸ್.ಎಂ.ಕೃಷ್ಣ ಅವರಂತಹ ನಾಯಕರು ನಮ್ಮೆಂದಿಗೆ ಇರುವುದು ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಆನೆ ಬಲ ಬಂದತ್ತಾಗಿದೆ ಎಂದು ಅವರು ಅಭಿನಂದಿಸಿದರು.