×
Ad

ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ: ಪ್ರತಾಪ ಸಿಂಹ

Update: 2019-05-01 18:30 IST

ಬೆಂಗಳೂರು, ಮೇ 1: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಹೀಗಾಗಿ ಕಳೆದ ಬಾರಿಗಿಂತ ಈ ಸಲ ಹೆಚ್ಚಿನ ಅಂತರದಲ್ಲಿ ನಾನು ಗೆಲುವು ಸಾಧಿಸಲಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆ ಬೇರೆ ಬೇರೆ ವಿಷಯಗಳ ಆಧಾರದಲ್ಲಿ ನಡೆಯುತ್ತವೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎನ್ನುವುದಕ್ಕೆ 1998 ರಿಂದ 2014 ರವರೆಗೂ ನಡೆದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿರುವುದೇ ಸಾಕ್ಷಿ ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಬೆಂಬಲಿಗರು ನನಗೆ ಮತ ಹಾಕಿದ್ದಾರೆ. ಹೀಗಾಗಿ ಈ ಸಲವೂ ನನ್ನ ಗೆಲುವು ಖಚಿತ. ಇದರಲ್ಲಿ ಯಾವುದೆ ಅನುಮಾನ ಬೇಡವೆಂದು ತಿಳಿಸಿದರು. ಇದಕ್ಕೂ ಮುನ್ನ ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News