ವಿಚಾರಣೆಗೆ ಹಾಜರಾಗಲು ಒಪ್ಪಿಕೊಂಡ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ

Update: 2019-05-01 16:27 GMT

ಹೊಸದಿಲ್ಲಿ, ಮೇ.1: ಸುಪ್ರೀಂ ಕೋರ್ಟ್ ನ ಮಾಜಿ ಉದ್ಯೋಗಿಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಮೂರ್ತಿಗಳ  ಸಮಿತಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಸಮಿತಿಯು  ಮುಖ್ಯಸ್ಥರಾದ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ  ಅವರು  ಮುಖ್ಯ  ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.

ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನ್ಯಾಯಮೂರ್ತಿ ಎಸ್.ಎ.ಬೊಬ್ಡೆ  ನೇತೃತ್ವದ ಸುಪ್ರೀಂ ಕೋರ್ಟ್ ನ ಉನ್ನತ ಮಟ್ಟದ ಸಮಿತಿಯಲ್ಲಿ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಇಂಧು ಮಲ್ಹೋತ್ರಾ ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News