ವಿಚಾರಣಾ ಸಮಿತಿ ಮುಂದೆ ಹಾಜರಾದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್

Update: 2019-05-01 17:28 GMT

ಹೊಸದಿಲ್ಲಿ, ಮೇ.1: ಸುಪ್ರೀಂ ಕೋರ್ಟ್ ನ ಮಾಜಿ ಉದ್ಯೋಗಿಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಮೂರ್ತಿಗಳ  ಉನ್ನತ ಮಟ್ಟದ   ಸಮಿತಿಯ  ಮುಂದೆ  ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.

ನ್ಯಾಯಮೂರ್ತಿ ಎಸ್.ಎ.ಬೊಬ್ಡೆ   ನೇತೃತ್ವದ ಸಮಿತಿಯು  ಮುಖ್ಯ  ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ನ್ಯಾಯಮೂರ್ತಿ ಎಸ್.ಎ.ಬೊಬ್ಡೆ  ನೇತೃತ್ವದ ಸುಪ್ರೀಂ ಕೋರ್ಟ್ ನ ಉನ್ನತ ಮಟ್ಟದ ಸಮಿತಿಯಲ್ಲಿ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಇಂಧು ಮಲ್ಹೋತ್ರಾ ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News