ಪರಮಾಣು ಬಟನ್ ಹೇಳಿಕೆ: ಮೋದಿಗೆ ಕ್ಲೀನ್‌ಚಿಟ್ ನೀಡಿದ ಚುನಾವಣಾ ಆಯೋಗ

Update: 2019-05-02 17:21 GMT

ಹೊಸದಿಲ್ಲಿ,ಮೇ.2: ಭಾರತದ ಪರಮಾಣು ಬಟನನ್ನು ದೀಪಾವಳಿಗಾಗಿ ಇಟ್ಟಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆಯಲ್ಲಿ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿರುವ ಚುನಾವಣಾ ಆಯೋಗ ಮೋದಿಗೆ ಮೂರನೇ ಬಾರಿ ಕ್ಲೀನ್‌ಚಿಟ್ ನೀಡಿದೆ.

ರಾಜಸ್ಥಾನದ ಗಡಿಪಟ್ಟಣ ಬರ್ಮೆರ್‌ನಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ ಪ್ರಧಾನಿ ಮೋದಿ ಸಶಸ್ತ್ರಪಡೆಗಳ ಬಗ್ಗೆ ಉಲ್ಲೇಖಿಸುತ್ತಾ ಭಾರತದ ಪರಮಾಣು ಬಟನನ್ನು ದೀಪಾವಳಿಗಾಗಿ ಇಟ್ಟಿಲ್ಲ ಎಂದು ಹೇಳಿಕೆ ನೀಡಿದ್ದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರುಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ಇದೀಗ ಮೂರನೇ ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್‌ಚಿಟ್ ನೀಡಿದೆ.

ಪ್ರಧಾನಿ ಹೇಳಿಕೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರುವ ಆಯೋಗ ಈ ವಿಷಯದಲ್ಲಿ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನ್ನ ಭಾಷಣಗಳಲ್ಲಿ ನಿರಂತರವಾಗಿ ಸಶಸ್ತ್ರಪಡೆಗಳನ್ನು ಉಲ್ಲೇಖಿಸುವ ಮೂಲಕ ಪ್ರಧಾನಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಹಾಗಾಗಿ ಅವರು ಪ್ರಚಾರ ನಡೆಸುವುದರ ಮೇಲೆ ನಿಷೇಧ ಹೇರಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News