ಪಿಯು ಕಾಲೇಜುಗಳ ಬೋಧಕ-ಬೋಧಕೇತರಿಗೆ ಬಯೋಮೆಟ್ರಿಕ್ ಕಡ್ಡಾಯ

Update: 2019-05-03 14:03 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 3: ಸರಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಬಯೋಮೆಟ್ರಿಕ್ ಹಾಜರಾತಿ ಪಡೆಯದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಸರಕಾರಿ ಹಾಗೂ ಅನುಧಾನಿತ ಪದವಿ ಪೂರ್ವ ಕಾಲೇಜುಗಳ ಕೆಲವು ಬೋಧಕರು ಕಾಲೇಜಿಗೆ ಸರಿಯಾಗಿ ಹಾಜರಾಗದೆ ಟ್ಯೂಷನ್, ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದಾರೆ ಎಂದ ದೂರುಗಳು ಕೇಳಿ ಬಂದಿವೆ. ಇದಕ್ಕೆ ಕಡಿವಾಣ ಹಾಕುವ ದೃಷ್ಟಿಯಿಂದ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿದೆ. ಸರಕಾರಿ ನೌಕರರಿಗೆ ಬಯೋಮೆಟ್ರಿಕ್ ಅಳವಡಿಕೆ 2013ರಲ್ಲಿ ಕಡ್ಡಾಯವಾಗಿದ್ದರೂ ಸಮರ್ಪಕವಾಗಿ ಅನುಷ್ಠಾನ ಆಗಿರಲಿಲ್ಲ. ಹೀಗಾಗಿ ಆಧಾರ್ ಆಧಾರಿತ ಆನ್‌ಲೈನ್ ಬಯೋಮೆಟ್ರಿಕ್ ಹಾಜರಾತಿ ತೆಗೆದುಕೊಂಡ ಬಗ್ಗೆ ಮೇ 4ರೊಳಗೆ ಕಾಲೇಜುಗಳ ಮುಖ್ಯಸ್ಥರು ವರದಿ ಸಲ್ಲಿಸಬೇಕೆಂದು ಇಲಾಖೆಯ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News