ಮಸೂದ್ ಅಝರ್ ಸೊತ್ತು ಸ್ಥಗಿತ, ಪ್ರಯಾಣ ನಿಷೇಧಕ್ಕೆ ಪಾಕ್ ಆದೇಶ

Update: 2019-05-03 14:27 GMT

ಇಸ್ಲಾಮಾಬಾದ್, ಮೇ 3: ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಮಸೂದ್ ಅಝರ್‌ನ ಸೊತ್ತುಗಳನ್ನು ಸ್ಥಗಿತಗೊಳಿಸಲು ಹಾಗೂ ಅವನ ಮೇಲೆ ಪ್ರಯಾಣ ನಿಷೇಧ ವಿಧಿಸಲು ಪಾಕಿಸ್ತಾನ ಅಧಿಕೃತ ಆದೇಶ ಹೊರಡಿಸಿದೆ. ಅಝರ್‌ನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ‘ಜಾಗತಿಕ ಭಯೋತ್ಪಾದಕ’ ಎಂಬುದಾಗಿ ಘೋಷಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಮಸೂದ್ ಅಝರ್ ವಿರುದ್ಧದ ವಿಶ್ವಸಂಸ್ಥೆಯ ನಿರ್ಣಯವನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಆದೇಶ ನೀಡಲು ಕೇಂದ್ರ ಸರಕಾರ ಸಂತೋಷಪಡುತ್ತದೆ ಎಂದು ಪಾಕಿಸ್ತಾನದ ವಿದೇಶ ಸಚಿವಾಲಯ ಬುಧವಾರ ಹೊರಡಿಸಿದ ಅಧಿಸೂಚನೆಯೊಂದು ಹೇಳಿದೆ.

ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥನ ವಿರುದ್ಧದ ದಿಗ್ಬಂಧನಗಳ ಜಾರಿಗೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲು ಸರಕಾರ ಅಧಿಕಾರಿಗಳಿಗೆ ಸೂಚಿಸಿದೆ ಎಂದು ಅಧಿಸೂಚನೆ ತಿಳಿಸಿದೆ.

ಅಝರ್‌ನನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ಕರೆ ನೀಡಿ ಫ್ರಾನ್ಸ್, ಬ್ರಿಟನ್ ಮತ್ತು ಅಮೆರಿಕಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿರುವ ನಿರ್ಣಯದ ಮೇಲೆ ತಾನು ಹೇರಿದ್ದ ತಾಂತ್ರಿಕ ತಡೆಯನ್ನು ಚೀನಾ ಬುಧವಾರ ತೆರವುಗೊಳಿಸಿದ ಬಳಿಕ, ಭದ್ರತಾ ಮಂಡಳಿಯು ಪಾಕಿಸ್ತಾನದಲ್ಲಿ ನೆಲೆಸಿರುವ ಉಗ್ರನನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿರುವುದನ್ನು ಸ್ಮರಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News