ನೀತಿ ಸಂಹಿತೆ ಮುಗಿದ ಬಳಿಕ ಮೀನುಗಾರರ ಕುಟುಂಬಕ್ಕೆ ಅಗತ್ಯ ನೆರವು: ಸಿಎಂ ಕುಮಾರಸ್ವಾಮಿ

Update: 2019-05-03 14:33 GMT

ಬೆಂಗಳೂರು, ಮೇ 3: ಸುವರ್ಣ ತ್ರಿಭುಜ ದೋಣಿಯಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಅಗತ್ಯ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಶುಕ್ರವಾರ ಉಡುಪಿಯ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ನೇತೃತ್ವದ ತಂಡ ಭೇಟಿ ಮಾಡಿ ಮಾತುಕತೆ ನಡೆಸಿತು.

ಈ ಸಂದರ್ಭದಲ್ಲಿ ಮೀನುಗಾರರ ಕುಟುಂಬಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ರಾಜ್ಯ ಸರಕಾರ ಯಾವುದೇ ನೆರವು ಘೋಷಿಸಲು ಸಾಧ್ಯವಿಲ್ಲ. ಮೇ 23ರ ನಂತರ ನೆರವು ಕುಟುಂಬಕ್ಕೆ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಮಲ್ಪೆ ಕಡಲಿನಲ್ಲಿ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಹಡಗು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದು, ಅದರಲ್ಲಿದ್ದ ಮೀನುಗಾರರ ಸುಳಿವು ಸಿಕ್ಕಿಲ್ಲ. ಐದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದರಿಂದಾಗಿ ನಾಪತ್ತೆಯಾಗಿದ್ದ ಹಡಗು ಸಿಕ್ಕಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News