×
Ad

25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪ: ಎಚ್.ಕೆ.ಪಾಟೀಲ್

Update: 2019-05-03 21:07 IST

ಗದಗ, ಮೇ 3: ಕುಂದಗೋಳ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರನ್ನು ಕನಿಷ್ಟ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಕರೆ ನೀಡಿದ್ದಾರೆ.

ಶುಕ್ರವಾರ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಸಂಶಿ ಗ್ರಾಮದಲ್ಲಿ ಇಂದು ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದು ಸಂಕಲ್ಪ ಮಾಡುವ ಕಾರ್ಯಕ್ರಮ. ನಾವೆಲ್ಲರೂ ಕುಸುಮಾ ಶಿವಳ್ಳಿ ಅವರನ್ನು 25ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪ ಮಾಡಬೇಕಾಗಿದೆ. ಕ್ಷೇತ್ರದಲ್ಲಿ ಸಿ.ಎಸ್.ಶಿವಳ್ಳಿಯವರು ಅನೇಕ ಅಭಿವೃದ್ದಿಗಳನ್ನು ಕೆಲಸಗಳನ್ನು ಮಾಡಿದ್ದಾರೆ. ಬಡವರ ಜೊತೆಯಲ್ಲಿ ಬದುಕಿದ್ದ ವ್ಯಕ್ತಿ ಶಿವಳ್ಳಿ ಅವರು. ಶಿವಳ್ಳಿಯವರನ್ನು ನಾವು ನೆನಪಿಟ್ಟುಕೊಂಡು ಕುಸುಮಾ ಶಿವಳ್ಳಿ ಅವರಿಗೆ ಮತ ಹಾಕಬೇಕು ಎಂದು ಪಾಟೀಲ್ ಸಲಹೆ ಮಾಡಿದರು.

ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅನೇಕ ಸಾಧನೆಗಳನ್ನು ಮಾಡಿದೆ. ಆ ಸಾಧನೆಗಳನ್ನು ನೋಡಿ ಮತ ನೀಡಿ ಎಂದು ಮನವಿ ಮಾಡಿದ ಅವರು, ಶಿವಳ್ಳಿ ಅವರನ್ನು ದೊಡ್ಡದಾದ ಮಟ್ಟದಲ್ಲಿ ಬೆಳೆಸಿದವರು ಡಿ.ಕೆ ಶಿವಕುಮಾರ್ ಅವರು. ಅವರಿಗೆ ದೊಡ್ಡ ಶಕ್ತಿ ಕೊಟ್ಟಿದ್ದು ಸಿದ್ದರಾಮಯ್ಯ ಎಂದು ಇದೇ ವೇಳೆ ಹೇಳಿದರು

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿ, ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News