ನಲಪಾಡ್ ಅರ್ಜಿ ವಿಚಾರಣೆ ಮೇ 8ಕ್ಕೆ ಮುಂದೂಡಿದ ಹೈಕೋರ್ಟ್

Update: 2019-05-03 15:58 GMT

ಬೆಂಗಳೂರು, ಎ.3: ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ ಶಾಸಕ ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ಮಕ್ಕಾಗೆ ತೆರಳಲು ಜಾಮೀನು ಷರತ್ತು ಸಡಿಲಿಕೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಈ ಕುರಿತು ಮುಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ನಲಪಾಡ್ ಪರ ವಾದಿಸಿದ ಹಿರಿಯ ಸಿ.ವಿ.ನಾಗೇಶ್ ಅವರು, ನಮ್ಮ ಕಕ್ಷಿದಾರರಾದ ಮುಹಮ್ಮದ್ ನಲಪಾಡ್ ಅವರು ಮೇ 4 ರಿಂದ ಜೂ.1ರವರೆಗೆ ಮಕ್ಕಾಗೆ ತೆರಳುತ್ತಿದ್ದಾರೆ. ಹೀಗಾಗಿ, ಇವರಿಗೆ ವಿಧಿಸಿರುವ ಜಾಮೀನು ಷರತ್ತುಗಳನ್ನು ಸಡಿಲಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ನ್ಯಾಯಪೀಠವು ವಕೀಲರ ವಾದವನ್ನು ಆಲಿಸಿ ಅರ್ಜಿ ವಿಚಾರಣೆಯನ್ನು ಮೇ 8ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News