×
Ad

ಸರಕಾರ ರಚಿಸುವ ಬಿಜೆಪಿಯವರ ಕನಸು ನನಸಾಗದು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

Update: 2019-05-04 19:37 IST

ಹುಬ್ಬಳ್ಳಿ, ಮೇ 4: ಬಿಜೆಪಿಯವರು ಬಹಳ ದಿನಗಳಿಂದ ರಾಜ್ಯದಲ್ಲಿ ಸರಕಾರ ರಚಿಸುವ ಆಸೆ ಇಟ್ಟುಕೊಂಡಿದ್ದು, ಅವರ ಹಗಲುಗನಸು ಯಾವುದೇ ಕಾರಣಕ್ಕೂ ನನಸಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಉತ್ತರ ನೀಡಲಿದ್ದೇವೆ. ಫಲಿತಾಂಶದ ಬಳಿಕ ಮೈತ್ರಿ ಸರಕಾರ ಬೀಳಲಿದೆ, ಮೇ 24ಕ್ಕೆ ಹೊಸ ಸರಕಾರ ರಚನೆ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಸರಕಾರ ಸುಭದ್ರವಾಗಿದ್ದು, ಇನ್ನೂ ಉಳಿದಿರುವ ತನ್ನ ಅವಧಿ ಪೂರೈಸುತ್ತದೆ. ಲೋಕಸಭಾ ಚುನಾವಣೆ ಫಲಿತಾಂಶ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

ಗೆಲುವು ನಮ್ಮದೇ: ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದ ಅವರು, ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಚುನಾವಣಾ ಆಯೋಗ ಅವಕಾಶ ನೀಡುತ್ತಿಲ್ಲ. ಹೀಗಾಗಿ ಸರಕಾರ ಕೈಕಟ್ಟಿ ಕೂರಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News